ಮಂಗಳೂರು: ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಾವೂರು ಇದರ ಸಭಾಂಗಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಮಂಗಲಾ ರಾವ್ ವಹಿಸಿ ಮಾತನಾಡಿ, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯದಲ್ಲಿ ಅಂಗನವಾಡಿ ಕೇಂದ್ರದ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು.

ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಗರ್ಭಿಣಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದಲ್ಲಿ ಪೌಷ್ಟಿಕ ಆಹಾರ ಹೇಗೆ ಪ್ರಾಮುಖ್ಯತೆ ವಹಿಸುತ್ತದೆ ಎಂಬ ಬಗ್ಗೆ ತಿಳಿಸಿದರು.
ಕೆ ಎಂ.ಸಿ ಯ ಸಮುದಾಯ ವೈದ್ಯಕೀಯ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಹಿತ್ ಎಂ ಅವರು ಮಾತನಾಡಿ, ಗರ್ಭಿಣಿ ಮಹಿಳೆಯರು ಸೇವಿಸಬೇಕಾದ ಅಹಾರ, ಆರೋಗ್ಯ ತಪಾಸಣೆ, ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಮತ್ತು ಪ್ಲಾಸ್ಟಿಕ್ ಮರುಬಳಕೆಯ ಬಗ್ಗೆ ಮಾಹಿತಿ ನೀಡಿದರು.

ಗರ್ಭಿಣಿ ಮಹಿಳೆಯರಿಗೆ ಸೀಮಂತ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು, ಸ್ತ್ರೀ ಶಕ್ತಿ ಸದಸ್ಯರು, ಅಂಗನವಾಡಿ ಸಹಾಯಕಿಯರು ಹಾಜರಿದ್ದು ವಿವಿಧ ರೀತಿಯ ಪೌಷ್ಟಿಕ ಆಹಾರಗಳನ್ನು ಪ್ರದರ್ಶಿಸಲಾಯಿತು. ಆಹಾರವನ್ನು ತಯಾರಿಸಿ ತಂದ ಮಹಿಳೆಯರಿಗೆ ನೆನಪಿನ ಕಾಣಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸ್ತ್ರೀ ಜಾಗೃತಿಯ ಸಂಚಾಲಕರಾದ ಸಂಶಾದ್, ಮೇಲ್ವಿಚಾರಕಿಯರಾದ ಸವಿತ, ಅನುಪಮ ಕೆ.ಎಸ್, ಅನುಪಮ ಸಿ, ಕಾವೂರು ೧೮ ನೇ ವಾರ್ಡ್ ನ ಮಹಾನಗರ ಪಾಲಿಕೆ ಸದಸ್ಯರಾದ ಗಾಯತ್ರಿ ರಾವ್, ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಉಪಸ್ಥಿತರಿದ್ದರು.
ಕದ್ರಿ ವಲಯದ ಕೀರ್ತಿ, ಸುಲೋಚನ, ರೇಖಾ, ಯಶವಂತಿ ಪ್ರಾರ್ಥನೆ ನಡೆಸಿದರು. ಮೇಲ್ವಿಚಾರಕಿ ಭವ್ಯ ಸ್ವಾಗತಿಸಿ, ಪಳನೀರು ವಿಶಾಲಾಕ್ಷಿ ವಂದಿಸಿ, ಮೇಲ್ವಿಚಾರಕಿ ಸಾಕು ಕಾರ್ಯಕ್ರಮ ನಿರೂಪಿಸಿದರು.
