ಮಂಗಳೂರು ನಗರದಲ್ಲಿ ಬಿರುಸುಗೊಂಡ ಮಳೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ
ಮಂಗಳೂರು ನಗರದಲ್ಲಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಅಲ್ಪ ಮಳೆಯಾಗಿತ್ತು. 10 ಗಂಟೆಯ ವೇಳೆಗೆ ಉತ್ತಮ ಮಳೆ ಸುರಿಯಿತು. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಉಡುಪಿ, ಉತ್ತರ ಕನ್ನಡದ ಒಂದು ಅಥವಾ ಎರಡು ಸ್ಥಳಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಹಾಗೂ ತುಮಕೂರು ಜಿಲ್ಲೆಗೆ ಇದೇ ಭಾನುವಾರ `ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.