Mangaluru : ವಿಶ್ವ ರೆಡ್ ಕ್ರಾಸ್ ದಿನಾಚರಣೆ- ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣೆ

ವಿಶ್ವ ರೆಡ್‍ಕ್ರಾಸ್ ದಿನ-2023 ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವು ಹಂಪಕಟ್ಟೆಯ ಮಂಗಳೂರು ವಿವಿಯ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ-2023 ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ನಗರದ ಹಂಪನಕಟ್ಟೆ ಮಂಗಳೂರು ವಿಶ್ವ ವಿದ್ಯಾ ನಿಲಯದ ರವೀಂದ್ರ ನಾಥ ಕಲಾಭವನದಲ್ಲಿ ಜೂನ್ 1ರಂದು ಪೂರ್ವಾಹ್ನ 11.30 ಗಂಟೆಗೆ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ.ಇದೇ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಯವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.
ಭಾರತೀಯ ರೆಡ್ ಕ್ರಾಸ್ ಕರ್ನಾಟಕ ಶಾಖೆಯ ಉಪಾಧ್ಯಕ್ಷ ಗೋಪಾಲ ಬಿ.ಹೊಸೂರು ಅಧ್ಯಕ್ಷ ತೆಯಲ್ಲಿ,ದ.ಕ ಜಿಲ್ಲಾ ಘಟಕದ ಸಭಾಪತಿ ಸಿ.ಎ ಶಾಂತಾರಾಮ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಮಂಗಳೂರು ವಿ.ವಿ.ಯ ಕುಲಪತಿ ಪ್ರೋ.ಪಿ.ಎಸ್. ಯಗಪಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ,ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಕಟಣೆ ತಿಳಿಸಿದೆ.
