ಮಂಗಳೂರು: ಉಳ್ಳಾಲಕ್ಕೆ ಮೂಲಸೌಕರ್ಯ ಒದಗಿಸಲು ರೋಡ್ ಮ್ಯಾಪ್, ಸ್ಪೀಕರ್ ಯು.ಟಿ. ಖಾದರ್
ಉಳ್ಳಾಲ ಕ್ಷೇತ್ರವನ್ನು ಮುಂದಿನ 30-40 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಡಿಯುವ ನೀರು, ರಸ್ತೆ, ವಿದ್ಯುತ್ ಮೂಲಭೂತ ಸೌಕರ್ಯವನ್ನು ಒದಗಿಸುವ ಮೂಲಕ, ಮಂಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಸಿದ್ಧಪಡಿಸಲಾಗುವುದು ಎಂದು ವಿಧಾನ ಸಭೆಯ ಸ್ಪೀಕರ್, ಸ್ಥಳೀಯ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.
ಅವರು ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಮಂಗಳೂರು ಕ್ಷೇತ್ರದಲ್ಲಿ ವಿದ್ಯುತ್ ಸೌಲಭ್ಯ ಕಲ್ಪಿಸುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಯಾವುದೇ ಅಭಿವೃದ್ಧಿಗೂ ವಿದ್ಯುತ್ ಅಗತ್ಯ. ಈ ನಿಟ್ಟಿನಲ್ಲಿ ಮಂಗಳೂರು ಕ್ಷೇತ್ರದ ಉಳ್ಳಾಲದಲ್ಲಿ ಈಗ ಇರುವ ಸಬ್ ಸ್ಟೇಷನ್ ಅನ್ನು ಮೇಲ್ದರ್ಜೆಗೇರಿಸಿ ಸಬ್ ಡಿವಿಜನ್ ಮಾಡಲಾಗುವುದು ಮತ್ತು ಅದರ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. 110 ಕೆವಿ ದೊಡ್ಡ ಮಟ್ಟದ ಪವರ್ ಸ್ಟೇಷನ್ ಮಾಡಲಾಗುವುದು ಎಂದರು. ದಿನದ 24 ಗಂಟೆಯೂ ಕುಡಿಯುವ ನೀರು ದೊರೆಯುವ ರೀತಿಯಲ್ಲಿ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.