ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಲ್ಲಿ ವಿಶಿಷ್ಟವಾಗಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್‌ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು.

ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ ಹೆಸ್ರು ಪಡೆದುಕೊಂಡಿರುವ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಹಕರಿಗೆ ಗಿಡಗಳನ್ನು ವಿತರಿಸುವ ಮೂಲ ಕ ಪರಿಸರ ಪ್ರೇಮವನ್ನ ತೋರಿಸಿದರು. ಹಲವಾರು ಮಂದಿ ಗ್ರಾಹಕರಿಗೆ ಗಿಡಗಳನ್ನು ವಿತರಣೆ ಮಾಡಲಾಯಿತು.

ಈ ವೇಳೆ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಫಳ್ನೀರ್ ಮಂಗಳೂರು ಮಳಿಗೆಯ ಸ್ಟೋರ್ ಹೆಡ್ ಶರತ್ ಚಂದ್ರನ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಖ್ ಫರ್ಹಾನ್, ಶೋರೂಂ ಮ್ಯಾನೇಜರ್ ರಘುರಾಂ ಸಿಎಸ್, ಮ್ಯಾನೇಜ್‌ಮೆಂಟ್ ಟ್ರೈನಿ ನಜರ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.