ಮಂಗಳೂರು: ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನ
ಜನವರಿ 22ರ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಜನವರಿ 15ರವರೆಗೆ ನಡೆಯಲಿದೆ. ಅಯೋದ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಾಣಪ್ರತಿಷ್ಠಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ ಹವನ ಸತ್ಸಂಗ, ಭಜನೆ , ಮುಂತಾದ ಕಾರ್ಯಕ್ರಮ ನಡೆಯಲಿದೆ. ಪ್ರಾಣ ಪ್ರತಿಷ್ಠೆಯ ನೇರಪ್ರಸಾರ ಕೂಡ ಆಯಾಯ ಕೇಂದ್ರಗಳಲ್ಲಿ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಹೇಳಿದರು.