ಮಾಣಿ : ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ
ವಿಟ್ಲ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ.
ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ, ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಹಾಗೂ ಕಾಂಗ್ರೇಸ್ ಕಾರ್ಯಕರ್ತ ಮಹಾಲಿಂಗ ನಾಯ್ಕ ಗಾಯಗೊಂಡಿದ್ದು, ಮೂವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ವಿಜಯೋತ್ಸವದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಈ ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರ್ ದಾಳಿ ನಡೆಸಲಾಗಿದೆ ಎಂಬ ಸಂದೇಶ ಹರಿದಾಡುತ್ತಿದ್ದು, ಈ ಬಗ್ಗೆ ದ.ಕ ಪೆÇೀಲಿಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿ, ಸದರಿ ಗಲಾಟೆಯಲ್ಲಿ ಪರಸ್ಪರ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಮುಂದೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.