ಮಂಜೇಶ್ವರ : ರಸ್ತೆ ದಾಟುತಿದ್ದ ವ್ಯಕ್ತಿಗೆ ಕಾರು ಡಿಕ್ಕಿ : ಪಾದಾಚಾರಿ ಗಂಭೀರ

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರಾವಸ್ಥೆಯಲ್ಲಿದ್ದ ಪಾದಾಚಾರಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಬಾಯಾರು ಚಿಗುರುಪಾದೆ ಕುಳೂರು ಕುಳ ಬೈಲು ನಿವಾಸಿ ಜಯಂತ (48) ಅಪಘಾತಕ್ಕೀಡಾದ ವ್ಯಕ್ತಿ.
ಅನಾರೋಗ್ಯ ಪೀಡಿತರಾದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲು ಹೊಸಂಗಡಿ ಸಹಕಾರಿ ಬ್ಯಾಂಕಿನಲ್ಲಿ ಚಿನ್ನ ಅಡವಿಟ್ಟು ಹಣ ಸಂಗ್ರಹಿಸಿ ಮಂಜೇಶ್ವರ ರಾಗಂ ಜಂಕ್ಷನ್ ತಲುಪಿ ಅಲ್ಲಿಂದ ರಸ್ತೆ ದಾಟುತ್ತಿರುವ ಮಧ್ಯೆ ಅಮಿತ ವೇಗದಲ್ಲಿ ವಿದ್ಯಾರ್ಥಿಗಳು ಸಂಚರಿಸುತಿದ್ದ ಕಾಸರಗೋಡು ಭಾಗದಿಂದ ಆಗಮಿಸಿದ ಇನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪ್ರಾಪ್ತ ಬಾಲಕರು ಚಲಾಯಿಸಿದ ಕಾರು ಪಾದಾಚಾರಿಗೆ ಡಿಕ್ಕಿ ಹೊಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಅಪಘಾತಕ್ಕೆ ಕಾರಣವಾದ ಕಾರು ಹಾಗೂ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದಿದ್ದಾರೆ.
