ಮಂಜೇಶ್ವರ : ತೋಡಿಗೆ ಮಗುಚಿದ ಶಾಲಾ ವಾಹನ – ಹಲವರಿಗೆ ಗಾಯ
ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ.
ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕೊಂಡೊಯ್ಯುತ್ತಿರುವ ಮಧ್ಯೆ ಶನಿವಾರ ಸಂಜೆ ಆರ್ವಾರ್ – ಅಂಬುತ್ತಡಿ ರಸ್ತೆಯ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ವಾಹನದಲ್ಲಿದ್ದ ಆರು ವಿದ್ಯಾರ್ಥಿಗಳು ಹಾಗೂ ಒಬ್ಬಳು ಶಿಕ್ಷಕಿ ಗಾಯಗೊಂಡಿದ್ದು ಇವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದಿರುವುದಾಗಿ ತಿಳಿದು ಬಂದಿದೆ.