ಮಂಜೇಶ್ವರದಲ್ಲಿ ಉದ್ಯೋಗ ಮೇಳ-2023
ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಭಾರತ ಉದ್ಯೋಗ ಕೇಂದ್ರ ಆಶ್ರಯದಲ್ಲಿ ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಉದ್ಯೋಗ ಮೇಳ-2023 ನಡೆಯಿತು.
ಕೇರಳದ ವಿದ್ಯಾವಂತ ಯುವಕ/ಯುವತಿಯರಿಗೆ ಸೌಕರ್ಯ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ರಾಷ್ಟ್ರೀಯ ಉದ್ಯೋಗ ಸೇವಾ ಇಲಾಖೆಯ ಮೂಲಕ ಉಚಿತ ಉದ್ಯೋಗ ವಲಯಗಳನ್ನು ಜಾರಿಗೊಳಿಸುತ್ತಿದೆ. ಈ ಯೋಜನೆಯ ಅಂಗವಾಗಿ 50 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ವಿವಿಧ ಖಾಸಗಿ ಉದ್ಯೋಗ ಕ್ಷೇತ್ರಗಳ ಅಧಿಕಾರಿಗಳು ಭಾಗವಹಿಸಿದ್ದರು.
ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರದ ಸಂಸದ ರಾಜಮೋಹನ್ ಉನ್ನಿತಾನ್ ಉದ್ಘಾಟಿಸಿದರು.
ಜಿಲ್ಲಾ ಉದ್ಯೋಗಾಧಿಕಾರಿ ಅಜಿತ್ ಜಾನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ ಇಂಬಾ ಶೇಖರನ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಶಮೀನಾ ಟೀಚರ್, ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೆರೋ ಜನಪ್ರತಿನಿಧಿಗಳಾದ ಕಮಲಾಕ್ಷಿ, ಎನ್.ಅಬ್ದುಲ್ ಹಮೀದ್, ಯಾದವ ಬಡಾಜೆ, ಅಶ್ವಿನಿ, ಗೋವಿಂದ ಪೈ ಕಾಲೇಜು ಪ್ರಾಂಶುಪಾಲ ಮಹಮ್ಮದಾಲಿ, ಉದ್ಯೋಗಾಧಿಕಾರಿ ಕೆ.ಗೀತಾ ಕುಮಾರಿ ಮೊದಲಾದವರು ಉಪಸ್ಥಿತರಿದ್ದರು.