ಮಂಜೇಶ್ವರ: ಕಸ ಎಸೆಯುವವರ ಪತ್ತೆಗೆ ಸಿಸಿ ಕ್ಯಾಮರಾ ಅಳವಡಿಕೆ

ಮಂಜೇಶ್ವರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆಯುತ್ತಿದ್ದು ಇದರಿಂದ ಜನತೆ ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದ್ದಾರೆ.

ಮಂಜೇಶ್ವರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಹಲವು ರೀತಿಯ ವಿಭಿನ್ನವಾದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತಿದ್ದರೂ ಯಾವುದೂ ಫಲಪ್ರದವಾಗುತ್ತಿರಲಿಲ್ಲ.

ಈ ನಿಟ್ಟಿನಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿರುವ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು 17 ಲಕ್ಷದ ಎಂಭತ್ತು ಸಾವಿರ ರೂಪಾಯಿ ವೆಚ್ಚದಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಉದ್ದೇಶಿಸಿದ್ದು, ಸಂಬಂಧಪಟ್ಟ ಕಂಪನಿಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಹೊಸಂಗಡಿ ಸಾರ್ವಜನಿಕ ಶೌಚಾಲಯ, ಗೋವಿಂದ ಪೈ ಕಾಲೇಜು ರಸ್ತೆ, ಗೇರು ಕಟ್ಟೆ, ಕುಂಜತ್ತೂರು -ಪದವು ರಸ್ತೆ, ಕಟ್ಟೆ ಬಜಾರ್ ಸೇರಿದಂತೆ 16 ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಈ ಸಂದರ್ಭ ಪಂಚಾಯತು ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ಹಾಗೂ ಕಲಟ್ರೋನ್ ಕಂಪನಿಯ ಸಿಬ್ಬಂದಿಗಳು ಜೊತೆಗಿದ್ದರು.

Related Posts

Leave a Reply

Your email address will not be published.