ಮಂಜೇಶ್ವರ: ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಡ್ರಗ್ಸ್ ಜಾಗೃತಿ ಶಿಬಿರ
ಮಂಜೇಶ್ವರದ ಕುನ್ನಿಲ್ ನೋಬಲ್ ಫೌಂಡೇಶನ್‍ನ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಡ್ರಗ್ಸ್ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಸಂಘಟನೆಯ ಅಧ್ಯಕ್ಷ ಝಕರಿಯ್ಯ ಶಾಲಿಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ರಾಜೇಶ್ ತೆರುವತ್ತ್ ಪೀಡಿಗಯಿಲ್ ಉದ್ಘಾಟಿಸಿದರು.
ಮಂಜೇಶ್ವರ ಠಾಣೆಯ ಜನ ಮೈತ್ರಿ ಪೊಲೀಸ್ ಅಧಿಕಾರಿಗಳಾದ ಮಧು ಕರಕಡವತ್ ಹಾಗೂ ಅನೂಪ್ ಡ್ರಗ್ಸ್ ದುಷ್ಟರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಉದ್ಯಾವರ ಸರಕಾರಿ ಗುಡ್ಡೆ ಶಾಲೆಯ ಅಧ್ಯಾಪಕರಾದ ಕೃಷ್ಣ ಮೂರ್ತಿ, ಪಿ ಟಿ ಎ ಅಧ್ಯಕ್ಷ ಅಬೂಬಕ್ಕರ್ ಹಾಗೂ ವಾರ್ಡ್ ಸದಸ್ಯ ಅಬೂಬಕ್ಕರ್ ಸಿದ್ದೀಖ್ ಉಪಸ್ಥಿತರಿದ್ದರು.