ಕರ್ನಾಟಕಕ್ಕೆ ಡಬಲ್ ಎಂಜಿನ್‍ನ ಅಗತ್ಯವೇ ಇಲ್ಲ : ಮಂಗಳೂರಿನಲ್ಲಿ ಎಮ್‍ಎಲ್‍ಸಿ ಮಂಜುನಾಥ ಭಂಡಾರಿ ಹೇಳಿಕೆ

ಯಾವುದೇ ಒಂದು ಎಂಜಿನ್‍ಗೆ ಸಾಮಥ್ರ್ಯ ಇಲ್ಲದಿದ್ದರೆ ಅಥವಾ ಒಂದು ಎಂಜಿನ್ ದುರ್ಬಲವಾಗಿದ್ದರೆ ಮಾತ್ರ ಡಬಲ್ ಎಂಜಿನ್ ಬಳಕೆ ಆಗುತ್ತದೆ. ಆದರೆ ಬಿಜೆಪಿಯವರು ಡಬಲ್ ಎಂಜಿನ್ ಸರ್ಕಾರ ಬೇಕು ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಬಿಜೆಪಿ ಇರುವ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದ್ದು, ಡಬಲ್ ಎಂಜಿನ್ ಸರ್ಕಾರ ಯಾಕೆ ವೈಫಲ್ಯವಾಯಿತು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನಿಸಿದರು.

ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ವಾ ಸಾಮಥ್ರ್ಯದ ಶಕ್ತಿಯನ್ನು ಹೊಂದಿರುವ ಎರಡನೇ ರಾಜ್ಯವಾಗಿರುವ ಕರ್ನಾಟಕ ರಾಜ್ಯಕ್ಕೆ ಡಬಲ್ ಎಂಜಿನ್‍ನ ಅಗತ್ಯವೇ ಇಲ್ಲ. ಕೇಂದ್ರ ಸರ್ಕಾರವನ್ನು ನಾವು ಅವಲಂಬಿಸುವ ಅಗತ್ಯವೇ ಇಲ್ಲ ಎಂದು ಹೇಳಿದರು.

ರಾಜ್ಯದ ಎಲ್ಲ ಜನರಿಗೂ ಅನ್ವಯವಾಗುವ ಗ್ಯಾರಂಟಿ ಯೋಜನೆಯನ್ನು ಈಗಾಗಲೇ ಪ್ರಕಟಿಸಿದೆ. ಅದನ್ನು ಹೊರತುಪಡಿಸಿ ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವು 10 ಪ್ರಮುಖ ಅಂಶಗಳನ್ನು ಪ್ರಕಟಿಸಿದೆ ಎಂದರು.

ಮೇ 7ರಂದು ಮಾಧ್ಯಾಹ್ನ 1 ಗಂಟೆಗೆ ಮೂಡುಬಿದರೆ ಕ್ಷೇತ್ರದ ಮುಲ್ಕಿಯಲ್ಲಿ ನಡೆಯುವ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಎಐಸಿಸಿ ಸಿಡಬ್ಲ್ಯುಸಿ ಸದಸ್ಯ ಅಜಯ್ ಕುಮಾರ್ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ವಕ್ತಾರ ಚರಣ್ ಸಿಂಗ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಉಪಸ್ಥಿತರಿದ್ದರು.

https://youtube.com/live/J53D4UM1AIY

Related Posts

Leave a Reply

Your email address will not be published.