ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಜ.13ರಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಗಗನ್ ಎಂ. ನಿರ್ದೇಶನದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಜನವರಿ 13ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈ ಸಿನಿಮಾ ಗಗನ್. ಎಂ ನಿರ್ದೇಶನದ ಚೊಚ್ಚಲ ಸಿನಿಮಾ ಆಗಿದ್ದು, ಈ ಸಿನಿಮಾದಲ್ಲಿ ನಾಯಕಿಯಾಗಿ ಬ್ರಹ್ಮಗಂಟು ಧಾರಾವಾಹಿಯ ಗೀತಾ ಭಾರತಿ ಹಾಗೂ ಪಂಚಮಿ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರೂಪೇಶ್ ಶೆಟ್ಟಿ ಅವರು ಕನ್ನಡದಲ್ಲಜ ಹೀರೋ ಆಗಿ ನಟಿಸಿದ 5ನೇ ಸಿನಿಮಾವಿದು. ಈಗಾಗಲೇ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಪ್ರೇಕ್ಷರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಂಗಳೂರು ಕನ್ನಡ ಶೈಲಿಯಲ್ಲಿ ಡೈಲಾಗ್‍ಗಳಿವೆ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕುವ ಹುಡುಗನ ಜೀವನದಲ್ಲಿ ನಡೆಯುವ ಪ್ರೇಮಕಥೆ ಈ ಸಿನಿಮಾದಲ್ಲಿದೆ.ಇದೆ’ ಪ್ರಕಾಶ್ ತುಮ್ಮಿನಾಡು, ಅರ್ಜುನ ಕಜೆ, ಪ್ರಶಾಂತ್ ಅಂಚನ್, ವಿವೇಕ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. `ಜೋಶ್ವ ಮೀಡಿಯಾ ಪ್ರೈವೇಟ್ ಲಿಮಿಟೆಡ್’ ಬ್ಯಾನರ್ ಮೂಲಕ ಜೋಶ್ವ ಜೈಶಾನ್ ಕ್ರಾಸ್ತಾ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿನ್ಯಾಸ್ ಮಧ್ಯ, ಶಮೀರ್ ಮುಡಿಪು ಸಂಗೀತ ನಿರ್ದೇಶನ, ಶಿನೋಯ್ ವಿ ಜೋಸೆಫ್ ಹಿನ್ನೆಲೆ ಸಂಗೀತ, ಎಂ.ಕೆ. ಷಹಜಹಾನ್ ಛಾಯಾಗ್ರಹಣ, ಸುಶಾಂತ್ ಶೆಟ್ಟಿ, ಪ್ರಜ್ವಲ್ ಸುವರ್ಣ ಸಂಕಲನ ಈ ಚಿತ್ರಕ್ಕಿದೆ. ಇನ್ನು ಗುರುವಾರ ಸಂಜೆ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾದ ಪ್ರೀಮಿಯರ್ ಶೋ ನಗರದ ಭಾರತ್ ಸಿನಿಮಾದಲ್ಲಿ ಪ್ರದರ್ಶನಗೊಳ್ಳಲಿದೆ.
