ಫೆ.11 : ಮರೋಳಿ ಶ್ರೀ ಸೂರ್ಯನಾರಾಯಣನ ಸನ್ನಿಧಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು ಗುಡ್ಡೆಗುತ್ತು ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಫೆ.11ರಂದು ಸಂಜೆ 4 ಗಂಟೆಗೆ ಬ್ರಹ್ಮಶ್ರೀ ಕೆ.ಯು ನೀಲೇಶ್ವರ ಪದ್ಮನಾಭ ತಂತ್ರಿವರ್ಯರ ಮಾರ್ಗದರ್ಶನದಲ್ಲಿ ಶ್ರೀವಾರಿ ಫೌಂಡೇಶನ್ ಇವರಿಂದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಜರುಗಲಿದೆ. ಸಮಾಜಕ್ಕೆ ಒಳಿತನ್ನು ಬಯಸುವ ಉದ್ದೇಶವನ್ನು ಇಟ್ಟುಕೊಂಡು ಶ್ರೀನಿವಾಸ ಕಲ್ಯಾಣೋತ್ಸವವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಶ್ರೀ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಜೆ. ಬಾಲಕೃಷ್ಣ ಕೊಟ್ಟಾರಿ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷರಾದ ಕೃಷ್ಣ ಎಸ್. ಆರ್. ಮರೋಳಿ, ರಂಜಿತ್ ಮರೋಳಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.