ಬೈಂದೂರಿನಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶವು ತೆಗ್ಗರ್ಸೆಯ ಗುಡ್ಡೆಯಂಗಡಿ ಫಾರ್ಮ್ ಹೌಸ್ ನಡೆಯಿತು.
ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಅವರು, ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ ಉದ್ಘಾಟಿಸಿ, ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಸಂಸತ್‌ಗೆ ಕಳುಹಿಸುವ ಕೆಲಸ ನಿಮ್ಮದು ಎಂದರು.
ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ೧೨ ಸಾವಿರ ಕೋಟಿ ಭ್ರಷ್ಟಾಚಾರದ ಆರೋಪ ಇತ್ತು. ಕಲ್ಲಿದ್ದಲು, ಟುಜಿ, ನೀರಿನಲ್ಲಿ ಈ ರೀತಿ ಭಷ್ಟಾಚಾರದ ಮೂಟೆ ಹೊತ್ತಿರುವ ಕಾಂಗ್ರೆಸ್‌ನವರು ಇವತ್ತು ಪ್ರಧಾನ ಮಂತ್ರಿಗಳಾಗಬೇಕಾ ಎಂದು ಪ್ರಶ್ನಿಸಿದರು.
ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬೈಂದೂರು ಚುನಾವಣೆಯ ಪ್ರಭಾರಿ ಅಶೋಕ್ ಮೂರ್ತಿ, ಬಿಜೆಪಿ ಮುಖಂಡ ಕೃಷ್ಣಪ್ರಸಾದ್ ಅಡ್ಯಂತಾಯ, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಅನಿತಾ ಆರ್.ಕೆ, ಎಸ್ ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.
