ಬೆಳ್ತಂಗಡಿ: ಮೇಲಂತಬೆಟ್ಟು ಬೈಕ್ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ..!
ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‍ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಬೈಕ್‍ನಲ್ಲಿದ್ದ 2.5 ವರ್ಷದ ಮಗು, ಮಹಿಳೆ ಹಾಗೂ ಬೈಕ್ ಸವಾರ ಮತ್ತು ಇನ್ನೊರ್ವ ಬೈಕ್ ಸವಾರ ಸೇರಿ ನಾಲ್ವರಿಗೂ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.