ಉಮಾನಾಥ್ ಕೋಟ್ಯಾನ್‍ಗೆ ಬೇನಾಮಿ ಆಸ್ತಿ : ಮಿಥುನ್ ರೈ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು ದಯವಿಟ್ಟು ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸರಕಾರ ಹಾಗೂ ಕೆಐಡಿಬಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಈ ಭಾಗದ ಕೃಷಿಕರ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರಯತ್ನ ನಡೆಸಿದ್ದಾರೆ ಎಂದು ಮಿಥುನ್ ರೈ ಆರೋಪಿಸಿದ್ದಾರೆ.

ಅವರು ಕಿನ್ನಿಗೋಳಿಯ ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಕೆಲ ತಿಂಗಳ ಹಿಂದೆ ಕಿನ್ನಿಗೋಳಿ ಸಮೀಪದ ಬಳ್ಕುಂಜೆ, ಕೊಲ್ಲೂರು, ಉಳೆಪಾಡಿ ಪ್ರದೇಶಗಳ ಸುಮಾರು ರೂ.1,000ಕ್ಕೂ ಮಿಕ್ಕಿ ಕೃಷಿ ಪ್ರದೇಶವನ್ನು ಸ್ವಾಧೀನ ಪಡಿಸುವುದರ ಬಗ್ಗೆ ಶಾಸಕ ಹಾಗೂ ಸಂಸದರ ಮಧ್ಯಸ್ಥಿಕೆಯಲ್ಲಿ ತಡೆಹಿಡಿಯಲಾಗಿದ್ದು ಎಲ್ಲಾ ಶಾಸಕರ ಹಾಗೂ ಸಂಸದರ ನಾಟಕವಾಗಿದೆ.

ಈ ಪ್ರದೇಶದಲ್ಲಿ ಈಗಾಗಲೇ ಕೈಗಾರಿಕೆಗಳಿಗೆ ಸರ್ವೆ ನಡೆಸಲಾಗಿದ್ದು ಶಾಸಕರು ಕೋಟ್ಯಂತರ ರೂ ಬೆಲೆ ಬಾಳುವ ಬೆನಾಮಿ ಆಸ್ತಿಗಳನ್ನು ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ ಇದರಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಭಾಗಿಯಾಗಿರಬಹುದು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಮಿಥುನ್ ರೈ ಒತ್ತಾಯಿಸಿದ್ದಾರೆ.

ಶಾಸಕ ಕೋಟ್ಯಾನ್ ಸುಳ್ಳು ಹೇಳಿ ಕೃಷಿಕರ ಹೊಟ್ಟೆಗೆ ಒಡೆಯುವ ಯತ್ನ ಮಾಡಿದ್ದಾರೆ. ಕೂಡಲೇ ಶಾಸಕರು ಬಳ್ಕುಂಜೆಯಲ್ಲಿ ಕೈಗಾರಿಕೆಗೆ ಭೂ ಸ್ವಾಧೀನ ನೆಪದಲ್ಲಿ ಮಾಡಿದ ಬೇನಾಮಿ ಆಸ್ತಿ ಬಗ್ಗೆ ತನಿಖೆಯಾಗಬೇಕು ಹಾಗೂ ಕೈಗಾರಿಕೆಗಳಿಗೆ ಭೂಸ್ವಾಧೀನದ ಬಗ್ಗೆ ಸರಕಾರಕ್ಕೆ ಬರೆದ ಪತ್ರದ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಮಿಥುನ್ ರೈ ಹೇಳಿದ್ದಾರೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶಾಸಕರ ವಿರುದ್ಧ ಹಾಗೂ ಕೃಷಿ ಭೂಮಿ ಉಳಿಸಲು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರಶಾಂತ್ ಶೆಟ್ಟಿ, ಮರಿನಾ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.