ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತಯಾಚನೆ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್, ಎಪಿಎಂಸಿಯ ಮಾಜಿ ಅಧ್ಯಕ್ಷ ಪ್ರವೀಣ್ ಜೈನ್, ವಾಲ್ಪಾಡಿ ಗ್ರಾ.ಪಂ. ಉಪಾಧ್ಯಕ್ಷೆ ಸುಶೀಲಾ, ಸದಸ್ಯ ಅರುಣ್ ಕುಮಾರ್ ಶೆಟ್ಟಿ , ಮುಖಂಡರಾದ ಸುಕುಮಾರ್ ಜೈನ್, ಪುರಸಭಾ ಸದಸ್ಯ ಕೊರಗಪ್ಪ, ಪುತ್ತಿಗೆ ಗ್ರಾ.ಪಂ.ಸದಸ್ಯ ಪುರುಷೋತ್ತಮ ನಾಯಕ್, ಕಾರ್ಯಕರ್ತರಾದ ನಿತೇಶ್ ದೇವಾಡಿಗ, ಸತೀಶ, ಸತ್ತಾರ್ ಮತ್ತಿತರರು ಈ ಸಂದರ್ಭದಲ್ಲಿದ್ದರು.