ಕಾಪು ಪುರಸಭೆ ಬೀಡುಬದಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ
ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್, ಪುರಸಭೆಯ ಪ್ರಭಾರ ಮುಖ್ಯಾಧಿಕಾರಿಗಳಾದ ಶಶಿಕಲಾ ಹಾಗೂ ಪುರಸಭೆಯ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

















