ಬೈತುರ್ಲಿ : 32 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ

ನಗರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಿದ್ದೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಪದವಿಪೂರ್ವ ವಾರ್ಡಿನ ಬೈತುರ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ 32 ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ರಾಜ್ಯದಲ್ಲಿ ಅಭಿವೃದ್ಧಿ ಪರ ಸರಕಾರದ ಆಡಳಿತವಿರುವ ಕಾರಣ ಜನೋಪಯೋಗಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿವೆ. ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಪ್ರಯತ್ನ ಸಾಗುತಿದ್ದು ಮುಂಬರುವ ದಿನಗಳಲ್ಲಿ ಇದರ ಫಲಿತಾಂಶ ಸಿಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್, ಸತೀಶ್ ಬೈತುರ್ಲಿ, ರಾಜೇಂದ್ರ, ಗಣೇಶ್ ಆಚಾರ್ಯ, ಬೇಬಿಯಣ್ಣ, ಸೋಮನಾಥ ಚೌಕಿ, ಹರಿಣಿ ಪ್ರೇಮ್, ದಿನೇಶ್ ಜ್ಯೋತಿನಗರ, ರಾಮದಾಸ್, ಕೇಶವ ಚೌಕಿ, ಅರುಣ್ ರಾವ್, ಪ್ರೇಮನಾಥ, ಪ್ರೀಯಾಂಕ, ಬಾಬಣ್ಣ, ಲಕ್ಷ್ಮಣ, ಸುಮಿತ್ರ, ದೇಜಪ್ಪ, ಸುಜಾತ, ಲೀಲಾವತಿ, ಉದಯ, ಹರೀಶ್, ರುಕ್ಸಾನ, ಹರಿಣಿ ರಾಮದಾಸ್ ಮತ್ತಿತರು ಉಪಸ್ಥಿತರಿದ್ದರು
