ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಭಕ್ತರು ಈ ದೇವಸ್ಥಾನಕ್ಕೆ ಆಗಮಿಸುತ್ತಿದ್ದು ,ದೇವಸ್ಥಾನ ಅಭಿವೃದ್ದಿಪಡಿಸುವ ಮೂಲಕ ಭಕ್ತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆಯನ್ನು ಸಿದ್ದಪಡಿಸಲಾಗಿದೆ. ಸರಕಾರ ಈ ಹಿಂದೆ ಘೋಷಣೆ ಮಾಡಿರುವ ಅನುದಾನ ಜೊತೆಗೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಶಾಸಕರು‌ ಮನವಿ ಮಾಡಿದರು.

ಸಚಿವರಿಗೆ ಸನ್ಮಾನ:
ಇದೇ ವೇಳೆ ದೇವಸ್ಥಾನದ ಆಡಳಿತ ಸಮಿತಿ ವತಿಯಿಂದ ಸಚಿವರನ್ನು ಸನ್ಮಾನ ಮಾಡಲಾಯಿತು.‌ಶಾಸಕರು ಶಾಲು ಹೊದಿಸಿ,ಫಲಪುಷ್ಪಗಳೊಂದಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್, ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ್ ರೈ ಮಟಂತಬೆಟ್ಟು, ಶಿವರಾಮ ಆಳ್ವ‌ಬಳ್ಳಮಜಲು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿನಯ್ ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಶಿವನಾಥ ರೈ ಉಪಸ್ಥಿತರಿದ್ದರು.

Related Posts

Leave a Reply

Your email address will not be published.