ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ : ನವಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ
ಪ್ರಧಾನಿ ನರೇಂದ್ರ ಮೋದಿ ಅವರು, ನವಮಂಗಳೂರಿನ ಬಂದರಿನಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೋನೊವಾಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹರ್ದಿಪ್ ಸಿಂಗ್ ಪುರಿ, ಶ್ರೀಪಾದ್ ಯಶೋನಾಯಕ್, ಸಂತುನು ಠಾಕೂರ್ ಭಾಗವಹಿಸಿದ್ದರು.