ಮಂಗಳೂರಿಗೆ ಮೋದಿ: ತರಾತುರಿಯಲ್ಲಿ ರಸ್ತೆಗೆ ತೇಪೆ ಕಾರ್ಯ

2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ ನಡೆಯುವ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸಾರ್ವಜನಿಕರಿಗೆ ಹಾಗೂ ಕಾರ್ಯಕರ್ತರಿಗೆ ಅನುವು ಮಾಡಿಕೊಡಲು ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ.

ಮೋದಿ ಸಂಚರಿಸುವ ಮಂಗಳೂರು ನಗರದಲ್ಲಿ ಕೆಲ ರಸ್ತೆಗಳಲ್ಲಿ ಗುಂಡಿ ಮುಚ್ಚು ಕಾರ್ಯ ಭರದಿಂದ ನಡೆಯುತ್ತಿದೆ. ನಾರಾಯಣಗುರು ವೃತ್ತಕ್ಕೆ ತರಾತುರಿಯಲ್ಲಿ ಮೆಟ್ಟಿಲಿನ ವ್ಯವಸ್ಥೆ ಹಾಗೂ ಕಾಮಗಾರಿ ನಡೆಸುತ್ತಿರುವುದು ಕಂಡುಬಂತು.

ಪ್ರಧಾನ ಮಂತ್ರಿಗಳು ರಾಜ್ಯಕ್ಕೆ ಆಗಮಿಸಿದಾಗ ಮಾತ್ರ ಪೋಲಿಸ್ ಇಲಾಖೆ ಹಾಗು ನಗರಾಭಿವೃದ್ದಿ ಇಲಾಖೆ ಈ ರೀತಿ ತರಾತುರಿಯಲ್ಲಿ ಕಾರ್ಯ ನಿರ್ವಹಿಸುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದು ಸಾರ್ವಜನಿಕರ ವಲಯದಲ್ಲಿ ಕೇಳಿ ಬರುವ ಮಾತಾಗಿದೆ.

ಭದ್ರತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರೋಡ್ ಶೋ ನಡೆಸಲಿರುವ ಪ್ರದೇಶದಲ್ಲಿರುವ ಜೇನುಗೂಡುಗಳನ್ನು ತೆರವುಗೊಳಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿದ್ದು ನಾರಾಯಣ ಗುರು ವೃತ್ತದಿಂದ ನವಭಾರತ ವೃತ್ತದವರೆಗೆ ರೋಡ್ ಶೋ ನಡೆಸಲಿದ್ದಾರೆ.

ರೋಡ್ ಶೋ ನಡೆಯುವ ಸ್ಥಳ, ಪಾರ್ಕಿಂಗ್ ಸ್ಥಳ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೋಡ್ ಶೋ ನಡೆಯುವ ಸ್ಥಳದ ಆಸುಪಾಸಿನ ಎಲ್ಲಾ ಕಟ್ಟಡಗಳು, ಸೇಪ್ ಹೌಸ್ ಮತ್ತು ನಗರದ ಪ್ರಮುಖ ರಸ್ತೆಗಳಲ್ಲಿರುವ ಆಸ್ಪತ್ರೆಗಳು ನಗರ ಪಾಲಿಕೆಯ ಆಯುಕ್ತರ ಕಚೇರಿ, ಕಾಲೇಜು, ಸರ್ಕ್ಯೂಟ್ ಹೌಸ್ ಮತ್ತಿತರ ಕಡೆಗಳಲ್ಲಿನ ಜೇನುಗೂಡುಗಳನ್ನು ತೆರವುಗೊಳಿಸಲು ಸೂಚನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಲಿದ್ದು, ಅದಕ್ಕಾಗಿ ತರಾತುರಿಯಲ್ಲಿ ಕೆಲಸಗಳನ್ನು ಮಂಗಳೂರು ಮಹಾನಗರ ಪಾಲಿಕೆ ನಡೆಸುತ್ತಿದೆ. ಮೋದಿಯವರ ರೋಡ್ ಶೋದಿಂದಾಗಿ ಮಂಗಳೂರು ನಗರದ ಹೊಂಡಗಳಿಗೆ ತಾತ್ಕಾಲಿಕ ಮುಕ್ತಿ ದೊರಕಿದಂತಾಗಿದೆ.

Related Posts

Leave a Reply

Your email address will not be published.