ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ ನೆಪದಲ್ಲಿ ಟಿಕೆಟ್ ಮಾರಿದ್ದಾರೆ. ನನ್ನ ಟಿಕೆಟ್ ತಪ್ಪಿಸಿದ್ದು ಡಿ.ಕೆ ಶಿವಕುಮಾರ್ ಅವರೇ, ನಾನು ಖಚಿತವಾಗಿ ಹೇಳುತ್ತೇನೆ. ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಸೋಲಿಸಲು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ. ಇನಾಯತ್ ಆಲಿ ಎಲ್ಲಿಂದ ಹಣ ಮಾಡಿದ್ದು ಗೊತ್ತಿದೆ, ಇನಾಯತ್ ಆಲಿ ಯಾರೆಂದೇ ಕ್ಷೇತ್ರದಲ್ಲಿ ಜನರಿಗೆ ಗೊತ್ತಿಲ್ಲ, ಕಾಂಗ್ರೆಸ್ ಕಾರ್ಯಕರ್ತರಿಗೂ ಗೊತ್ತಿಲ್ಲ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಇನಾಯತ್ ಗೆದ್ದರೆ ನನ್ನ ತಲೆ ಕೊಡಲು ಸಿದ್ಧನಿದ್ದೇನೆ ಎಂದು ಮಂಗಳೂರಿನಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವ ಅವರು ಡಿಕೆಶಿ ವಿರುದ್ಧ ಕಿಡಿ ಕಾರಿದ್ದಾರೆ.