ಮೂಡುಬಿದಿರೆ: ರಾಜ್ಯಮಟ್ಟದ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ : ಯೆನೆಪೋಯ ಕಾಲೇಜ್ ತಂಡ ಚಾಂಪಿಯನ್

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ.

ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ, 3 ಕಂಚಿನ ಪದಕ ಗೆದ್ದು ತೃತಿಯ ತಂಡ ಚಾoಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಪುರುಷರ 67 ಕೆ. ಜಿ ವಿಭಾಗದಲ್ಲಿ ಪ್ರನೀತ್ ಶೆಟ್ಟಿ , ಮಹಿಳೆಯರ 55 ಕೆ. ಜಿ, ವಿಭಾಗದಲ್ಲಿ ಮಾನ್ಯ ಎಸ್ ಕೆ ಹಾಗೂ 71 ಕೆ. ಜಿ ವಿಭಾಗದಲ್ಲಿ ನಿತ್ಯಾ ಎಸ್ ಪಿ ಚಿನ್ನದ ಪದಕ ಗೆದ್ದು ಇವರು ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯ, ಗುಂಟೂರ್ ಆಂಧ್ರಪ್ರದೇಶನಲ್ಲಿ ನವೆಂಬರ್ 26ರಿಂದ ಡಿಸೆಂಬರ್ 3 ರವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಂಡ ವನ್ನು ಪ್ರತಿನಿಧಿಸಲಿದ್ದಾರೆ.

ಈ ಕ್ರೀಡಾಪಟುಗಳಿಗೆ ಯೇನೆಪೋಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಲೋಕೇಶ್ ತರಬೇತಿ ನೀಡುತ್ತಿದ್ದಾರೆ.

Related Posts

Leave a Reply

Your email address will not be published.