ಮೂಡುಬಿದರೆ ಕೋ-ಅಪರೇಟಿವ್ ಸರ್ವೀಸ್ ಸೊಸೈಟಿ : ಸಹಕಾರ ಸಪ್ತಾಹ ಸಂಭ್ರಮ ಸಮಾರೋಪ

ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಕಲ್ಪವೃಕ್ಷ ಸಭಾಭವನದಲ್ಲಿ ನ.14ರಿಂದ 20ರ ತನಕ ನಡೆದ ಸಹಕಾರ ಸಪ್ತಾಹ ಸಂಭ್ರಮ-2022ರ ಸಮಾರೋಪ ಸಮಾರಂಭ ನಡೆಯಿತು.

ಕರ್ನಾಟಕ ರಾಜ್ಯ ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ 25 ವರ್ಷಗಳಿಂದ ಎಂಸಿಎಸ್ ಸೊಸೈಟಿ ಶೇ. 25 ಡಿವಿಡೆಂಡ್ ನೀಡುತ್ತ ಬಂದಿರುವುದು ದಾಖಲೆ. ರಾಜ್ಯದ 21 ಜಿಲ್ಲೆಗಳಲ್ಲಿರುವ ಡಿಸಿಸಿ ಬ್ಯಾಂಕುಗಳಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಂಚೂಣಿಯಲ್ಲಿರುವುದು ಈ ಜಿಲ್ಲೆಯ ಸಹಕಾರಿ ರಂಗಕ್ಕೆ ಸಲ್ಲುವ ಗೌರವವಾಗಿದೆ ಎಂದು ಹೇಳಿದರು.

ಶ್ರೀ ಕ್ಷೇತ್ರ ಕಟೀಲಿನ ಲಕ್ಷ್ಮೀ ನಾರಾಯಣ ಆಸ್ರಣ್ಣ ಆಶೀರ್ವಚನವಿತ್ತರು.ಸಹಕಾರ ಮಹಾಮಂಡಲದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ ಶೆಟ್ಟಿ, ಸೊಸೈಟಿ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಉಪಸ್ಥಿತರಿದ್ದರು.

ಸಾಧಕ ಪ್ರಶಸ್ತಿ: ಇತಿಹಾಸ ತಜ್ಞ, ಸಂಶೋಧಕ, ಸಾಮಾಜಿಕ, ಸಾಹಿತ್ಯ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯರಾಗಿರುವ ಡಾ. ಪುಂಡಿಕಾೈ ಗಣಪಯ್ಯ ಭಟ್ ಅವರಿಗೆ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕ.ರಾ. ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಡಾ. ಎಂ.ಎನ್.ಆರ್.ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಸಮ್ಮಾನಿಸಲಾಯಿತು. ಮೂಡುಬಿದಿರೆ ಸಹಕಾರ ತರಬೇತಿ ಕೇಂದ್ರದ ವಿಜೇತ ವಿದ್ಯಾರ್ಥಿಗಳು, ಎಸ್ಸೆಸ್ಸೆಲ್ಸಿ ಯಲ್ಲಿ ಪೂರ್ಣಾಂಕ ಗಳಿಸಿದ ಶ್ರೀಜಾ ಹೆಬ್ಬಾರ್ ಮತ್ತು ಸ್ವಸ್ತಿಶ್ರೀ ಜೈನ್ ಅವರನ್ನು ಅಭಿನಂದಿಸಲಾಯಿತು.ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ. ಸ್ವಾಗತಿಸಿ ಪ್ರಸ್ತಾವನೆಗೈದರು. ವಿನಯಕುಮಾರ್ ನಿರೂಪಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಧರಣೇಂದ್ರ ಜೈನ್ ವಂದಿಸಿದರು.

Related Posts

Leave a Reply

Your email address will not be published.