ಮೂಡುಬಿದರೆ : ಅಕ್ರಮ ಗೋವು ಸಾಗಾಟ – ಮೂರು ಗೋವುಗಳ ರಕ್ಷಣೆ

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ.
ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಹಿಡಿದಿದ್ದಾರೆ.
ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಮೂಡುಬಿದಿರೆಯ ಪೊಲೀಸ್ ಉಪ ನಿರೀಕ್ಷಕ ಸಿದ್ದಪ್ಪ, ಬಜರಂಗದಳದ ತಾಲೂಕು ಸಂಚಾಲಕ ಅಭಿಲಾಶ್ ಸಹಿತ ಕಾರ್ಯಕರ್ತರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
