ಮೂಡುಬಿದಿರೆ: ವಿಶೇಷ ಚೇತನರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ದ.ಕ ಜಿಪಂ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವುಗಳ ಸಹಯೋಗದೊಂದಿಗೆ ಸ್ವರಾಜ್ಯ ಮೈದಾನದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ವಿಶೇಷ ಸಾಮಥ್ರ್ಯದ ಮಕ್ಕಳ ಕ್ರೀಡಾ ಕೂಟಕ್ಕೆ ಮೂಡುಬಿದಿರೆ ರೋಟರಿ ಕ್ಲಬ್‍ನ ಅಧ್ಯಕ್ಷ ನಾಗರಾಜ್ ಬಿ.ಚಾಲನೆಯನ್ನು ನೀಡಿದರು.
