ಮೂಡುಬಿದಿರೆ : ಪುರಸಭಾ ವ್ಯಾಪ್ತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥ
ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆ ಪುರಸಭಾ ವ್ಯಾಪ್ತಿಗೆ ಆಗಮಿಸಿದ್ದು ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ತಾಲೂಕು ಆಡಳಿತ ಸೌಧದ ಮುಂಭಾಗ ಬರಮಾಡಿಕೊಂಡರು.
ನಂತರ ತಹಶೀಲ್ದಾರ್ ಅವರು ಅಂಬೇಡ್ಕರ್ ಅವರ ಸ್ತಬ್ಧ ಚಿತ್ರಕ್ಕೆ ಹಾರಾರ್ಪಣೆಗೈದರು.
ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ಕೊರಗಪ್ಪ, ಸುರೇಶ್ ಕೋಟ್ಯಾನ್, ನವೀನ್ ಶೆಟ್ಟಿ, ಪುರಂದರ ದೇವಾಡಿಗ ಮತ್ತು ಇಂದು ಎಂ.ಅವರು ಪುಷ್ಪಾರ್ಚನೆಗೈದರು.
ಇದಕ್ಕೂ ಮೊದಲು ಜಾಗೃತಿ ರಥದಿಂದ ಮೂಡುಬಿದಿರೆ ಪೇಟೆಯಲ್ಲಿ ರ್‍ಯಾಲಿ ನಡೆಯಿತು. ದ್ವಿಚಕ್ರ ವಾಹನಗಳು, ಆಳ್ವಾಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು, ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು,ಪುರಸಭಾ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆಯ ಸಿಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಕರಾವಳಿ ಜಾನಪದ ಕಲಾವೇದಿಕೆ ಸುರತ್ಕಲ್ ನ ಎಂ.ವಿಶ್ವನಾಥ ಶೆಟ್ಟಿ ಅವರ ತಂಡದ ಸದಸ್ಯರು ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.