ಮೂಡುಬಿದಿರೆ: ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ದಿನೇಶ್ ಜಿ.ಡಿ ಭಡ್ತಿ
ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.
ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಮತ್ತೆ ಮೂಡುಬಿದಿರೆಗೆ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಬಂದಿದ್ದರು.