ಮೂಡುಬಿದಿರೆ : ಅರ್ಚಕ ಅಡಿಗಳ್ ಶ್ರೀನಿವಾಸ ಭಟ್ ನಿಧನ
ಮೂಡುಬಿದಿರೆ : ಪುತ್ತಿಗೆ ಗ್ರಾಮದ ಹಿರಿಯ ಅರ್ಚಕ, ಶತಾಯುಷಿ ಅಡಿಗಳ್ ಶ್ರೀನಿವಾಸ ಭಟ್ (100) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.
ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸುಮಾರು 65 ವರ್ಷಗಳ ಕಾಲ ಸೋಮನಾಥೇಶ್ವರ ಹಾಗೂ ಸಪರಿವಾರ ದೇವರುಗಳ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.