ಮೂಡುಬಿದಿರೆ : ಪಿಯುಸಿ ಫಲಿತಾಂಶ : ಆಳ್ವಾಸ್ ಸಾರ್ವತ್ರಿಕ ದಾಖಲೆ

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.
ಪಿಯುಸಿಯಲ್ಲಿ ಫಲಿತಾಂಶದಲ್ಲಿ ಆಳ್ವಾಸ್ ಸಂಸ್ಥೆಯು ಅತ್ಯುತ್ತಮ ಸಾಧನೆ ಮಾಡಿರುವ ಬಗ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ವಿಜ್ಞಾನ ವಿಭಾಗದಲ್ಲಿ ನೂತನ ಆರ್ ಗೌಡ, 600ರಲ್ಲಿ 595 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತರುಣ್ ಕುಮಾರ್ ಪಾಟೀಲ್ 594 ಅಂಕ ಪಡೆದು 4ನೇ ಸ್ಥಾನ ಪಡೆದಿದ್ದಾರೆ. ಆಕಾಶ್ ಪಿಎಸ್, ಅನಿರುದ್ಧ ಪಿ ಮೆನನ್, ಸುಮಿತ್ ಸುದೀಂದ್ರ ಕಾಮತ್ 5ನೇ ಬ್ಯಾಂಕ್ ಗಳಿಸಿದರೆ, ಸಹನಾ ಕೆ, ಶಿವಷೇಶ 6ನೇ ರಾಂಕ್, ವಾಣಿ ಕೆ. ಮೇಧಾ ವಿ. ಜೀವಿಕಾ ಎಸ್. ಹರೀಶ್ ಉದಯ್, ಭೂಮಿ, ಷಾನ್ ಪಿಂಟೋ, ಅಶೋಕ್ ಸುತಾರ್, ಮಂಜುನಾಥ್ ಡಿ. 7ನೇ ಯಾಂಕ್ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.

29 ವಿದ್ಯಾರ್ಥಿಗಳು 98.33%ಕ್ಕೂ ಅಧಿಕ, 56 ವಿದ್ಯಾರ್ಥಿಗಳು 98%ಕ್ಕೂ ಅಧಿಕ ಫಲಿತಾಂಶ ಪಡೆದಿದ್ದು, 682 ವಿದ್ಯಾರ್ಥಿಗಳು 95% ಕ್ಕಿಂತಲೂ ಅಧಿಕ, 2027 ವಿದ್ಯಾರ್ಥಿಗಳು 90%ಕ್ಕಿಂತಲೂ ಅಧಿಕ. 2882 ವಿದ್ಯಾರ್ಥಿಗಳು 85% ಕ್ಕೂ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಕನ್ನಡ ವಿಷಯದಲ್ಲಿ 22, ಸಂಸ್ಕೃತದಲ್ಲಿ 54, ಬೌತಶಾಸ್ತ್ರದಲ್ಲಿ 9, ರಸಾಯನ ಶಾಸ್ತ್ರದಲ್ಲಿ 81. ಗಣಿತದಲ್ಲಿ 232, ಜೀವಶಾಸ್ತ್ರದಲಿ 290, ಗಣಕ ವಿಜ್ಞಾನದಲ್ಲಿ 39, ಅಕೌಂಟೆನ್ಸಿ-53, ಸಂಖ್ಯಾಶಾಸ್ತ್ರದಲ್ಲಿ 07, ಇಲೆಕ್ಟ್ರಾನಿಕ್ಸ್ ನಲ್ಲಿ 4, ಅರ್ಥಶಾಸ್ತ್ರದಲ್ಲಿ 35, ಬ್ಯುಸಿನೆಸ್ ಸ್ಟಡೀಸ್ ನಲ್ಲಿ 09, ಬೇಸಿಕ್ ಮ್ಯಾಕ್ಸ್ ನಲ್ಲಿ 27, ಸಮಾಜಶಾಸ್ತ್ರದಲ್ಲಿ 2, ರಾಜ್ಯಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

4 ವಿಷಯಗಳಲ್ಲಿ ನೂರಕ್ಕೆ ನೂರು ಅಂಕವನ್ನು 9 ವಿದ್ಯಾಥಿಗಳು ಪಡೆದರೆ, 3 ವಿಷಯಗಳಲ್ಲಿ ನೂರಕ್ಕೆ ನೂರು 38 ವಿದ್ಯಾರ್ಥಿಗಳು, 2 ವಿಷಯಗಳಲ್ಲಿ 148 ವಿದ್ಯಾಥಿಗಳು ನೂರಕ್ಕೆ ನೂರು ಅಂಕವನ್ನು ಪಡೆದರೆ, ಒಂದು ವಿಷಯದಲ್ಲಿ 571 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕವನ್ನು ಪಡೆದಿದ್ದಾರೆ.
ದತ್ತು ಸ್ವೀಕಾರ ಯೋಜನೆಯಲ್ಲಿ ಕ್ರೀಡೆ, ಸಾಂಸ್ಕೃತಿಕ, ಕಲೆಗೆ ಸಂಬಂಧಿಸಿದಂತೆ 41 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

ಆಳ್ವಾಸ್ ಪದವಿಪೂರ್ವ ಕಾಲೇಜಿನ 5 ಜನ ವಿಶೇಷಚೇತನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದು ಸಾಧನೆ ಮೆರೆದಿದ್ದಾರೆ.

18 ವರ್ಷಗಳಿಂದ ಶೇ 100 ಫಲಿತಾಂಶ : ಇಂಗ್ಲೀಷ್ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ 18 ವರ್ಷಗಳಿಂದ ಸಂಸ್ಥೆಯು ಶೇ 100 ಫಲಿತಾಂಶವನ್ನು ದಾಖಲಿಸುತ್ತಾ ಬರುತ್ತಿರುವುದು ಸಾಧನೆ.

ಜಿಲ್ಲೆಯಲ್ಲೇ ಅತ್ಯಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದ ಸಂಸ್ಥೆ : ದ್ವಿತೀಯು ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 3500 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಅವಿಭಜಿತ ದ.ಕ., ಉಡುಪಿ ಜಿಲ್ಲೆಯಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಾಂಶುಪಾಲ ಪ್ರೊ. ಎಂ. ಸದಾಕತ್, ಕಾಮರ್ಸ್ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ಉಪಸ್ಥಿತರಿದ್ದರು.

Related Posts

Leave a Reply

Your email address will not be published.