ಮೂಡುಬಿದಿರೆ: ಪ್ರೇಮ್ ಬಹದ್ದೂರ್ ನಿಧನ
ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಬಹದ್ದೂರು ಅವರಿಗೆ ಪತ್ನಿ, ಓರ್ವ ಪುತ್ರ ಮತ್ತು 6 ಮಂದಿ ಪುತ್ರಿಯರನ್ನು ಅಗಲಿದ್ದಾರೆ.