ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ ಪ್ರಕಟ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಗೆ ಕವಿ ಡಾ. ಚಿನ್ನಸ್ವಾಮಿ ಮೂಡ್ನಾಕೂಡು ಬೆಂಗಳೂರು, ಜಾನಪದ ವಿದ್ವಾಂಸ ಪ್ರೊ.ಕೃಷ್ಣಮೂರ್ತಿ ಹನೂರ, ಕನ್ನಡದ ಕೀಲಿಮಣೆ ವಿನ್ಯಾಸಕಾರ ಉಡುಪಿಯ ಕೆ.ಪಿ ರಾವ್ ಹಾಗೂ ಹೆಗ್ಗೋಡಿನ ನಿನಾಸಂ ಸಂಸ್ಥೆಗೆ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ್ ಮಾವಿನಕುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
