ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಶ್ರೀರಾಮ್ ಗೆ ಬಿ. ಸಿ. ಎ. ವಿಭಾಗದಲ್ಲಿ 9ನೇ ರ್‍ಯಾಂಕ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್‍ಯಾಂಕ್ ಗಳಿಸಿರುತ್ತಾರೆ.
ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
