ಮೂಡುಬಿದಿರೆ : ಮಹಿಳೆ ಆತ್ಮಹತ್ಯೆ
ಮೂಡುಬಿದಿರೆ : ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿರುವ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇಮಾರಿನಲ್ಲಿ ಶುಕ್ರವಾರ ಬೆಳಿಗ್ಗೆ ತಿಳಿದು ಬಂದಿದೆ.
ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಡಿಹಿಲ್ಲು ನಿವಾಸಿ ಪ್ರಮೀಳಾ (36ವ)ಅವರು ಮಾಡಿಕೊಂಡ ಮಹಿಳೆ. ಈಕೆ ಗಂಡನನ್ನು ಕಳೆದುಕೊಂಡ ಮೇಲೆ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವನ್ನು ಹೊಂದಿದ್ದ ಪ್ರಮೀಳಾ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು ಶುಕ್ರವಾರ ಬೆಳಕಿಗೆ ಬಂದಿದೆ.
ಪಾಲಡ್ಕ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಕೇಮಾರು ಸುಕೇಶ್ ಶೆಟ್ಟಿ, ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಹಾಗೂ ಕರುಣಾಕರ ಅವರ ಸಹಕಾರದಿಂದ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.