ಮೂಡುಬಿದಿರೆ ವಕೀಲರ ಭವನ ಲೋಕಾರ್ಪಣೆ

ಮೂಡುಬಿದಿರೆ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಅಲ್ಲಿ ವ್ಯಾಜ್ಯಗಳು ಇರಬಾರದು, ವ್ಯಾಜ್ಯಗಳು ಕಡಿಮೆಯಾಗಬೇಕಾದರೆ ವಕೀಲರು ಬಡಜನರಿಗೆ ತ್ವರಿತಗತಿಯಲ್ಲಿ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಹೇಳಿದರು. ದ.ಕ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡುಬಿದಿರೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ವಕೀಲರ ಭವನ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ನ್ಯಾಯ ಕೇಳಿಕೊಂಡು ಬಂದವರಿಗೆ ವಿಳಂಭ ಮಾಡದೆ, ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸಲು ವಕೀಲರು ಕಟಿಬದ್ಧರಾಬೇಕು. ಕಮೀಷನ್‍ಗಾಗಿ ಕಕ್ಷಿಗಾರರನ್ನು ಸತಾಯಿಸುವುದು ಸರಿಯಲ್ಲ ಎಂದರು.

ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹೈಕೋಟ್ 9ನ ನ್ಯಾಯಮೂರ್ತಿಗಳಾದ ಬಿ.ವೀರಪ್ಪ, ಹೈಕೋರ್ಟ್ನ ನ್ಯಾಯಮೂರ್ತಿ ಹಾಗೂ ದ.ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಮುಖ್ಯ ಅತಿಥಿಗಳಾಗಿದ್ದರು. ಹೈಕೋರ್ಟನ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರು, ಎಸ್.ವಿಶ್ವಜಿತ್ ಶೆಟ್ಟಿ, ಸಿ.ಎಂ ಜೋಶಿ, ಟಿ.ಜಿ ಶಿವಶಂಕರೇ ಗೌಡ, ಕೆ.ಎಸ್ ಭರತ್ ಕುಮಾರ್, ದ.ಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ.ಜೋಶಿ, ಶಾಸಕ ಉಮಾನಾಥ ಕೋಟ್ಯಾನ್, ಹೈಕೋರ್ಟ್‍ನ ಮಹಾವಿಲೇಖಾನಾಧಿಕಾರಿ ಮುರಳೀಧರ ಪೈ ಬಿ., ಹಿರಿಯ ವಕೀಲ ಪಿ.ಪಿ ಹೆಗ್ಡೆ, ಮೂಡುಬಿದಿರೆ ವಕೀಲರ ಸಂಘದ ಸ್ಥಾಪಕಾಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಎಂ.ಕೆ ದಿವಿಜೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಎಸ್.ಲೋಬೊ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಕಾಂತರಾಜು ಬಿ.ಟಿ, ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಯಶವಂತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ವೇತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.