ಮೂಡುಬಿದಿರೆ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದ ನಂತರ ಪಾಶ್ವ ವಾಯುಗೆ ಸಿಲುಕಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಚೇತರಿಸಿಕೊಂಡಿದ್ದ ಅವರು ಮನೆಯ ಬಳಿಯಲ್ಲೇ ಫಾಸ್ಟ್ ಫುಡ್ ಅಂಗಡಿ ನಡೆಸುವುದಾಗಿ ಹೇಳಿಕೊಂಡಿದ್ದರು. ಆದರೆ ಮಂಗಳವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಜಾನ್ ಅವರಿಗೆ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.