ಮೂಡುಬಿದಿರೆಯಲ್ಲಿ 20 ಅಕ್ರಮ ಕಸಾಯಿಖಾನೆಗಳು….!!ಮಕೈಗೊಳ್ಳದಿದ್ದರೆ ಉಗ್ರ ಹೋರಾಟ ಹಿಂಜಾವೇ ಎಚ್ಚರಿಕೆ

ಮೂಡುಬಿದಿರೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 20ಕ್ಕಿಂತಲೂ ಅಧಿಕ ಅಕ್ರಮ ಕಸಾಯಿಖಾನೆಗಳಿದ್ದು, ಪೊಲೀಸರು ಈ ಅಕ್ರಮ ಕಸಾಯಿಖಾನೆಯ ವಿರುದ್ಧ ಯಾವುದೇ ಕಾನೂನು ಕ್ರಮವನ್ನು ಜರಗಿಸದೆ ಅಕ್ರಮ ಗೋವುಗಳ ಕಸಾಯಿಖಾನೆಯನ್ನು ನಡೆಸುವವರಿಗೆ ಸಹಕಾರವನ್ನು ನೀಡುತ್ತಿದ್ದು ಈ ಬಗ್ಗೆ ಉಗ್ರ ಹೋರಾಟವನ್ನು ಮಾಡುವುದಾಗಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ ಎಚ್ಚರಿಕೆ ನೀಡಿದ್ದಾರೆ.
ಅವರು ಮೂಡುಬಿದಿರೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಅಕ್ರಮ ಕಳ್ಳ ಸಾಗಾಣೆ ಮತ್ತು ಅಕ್ರಮ ಕಸಾಯಿಖಾನೆ ದಂಧೆಯ ಬಗ್ಗೆ ವಿರೋಧಿಸಿ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದೊಡ್ಡ ಮಟ್ಟದಲ್ಲಿ ಗೋವುಗಳ ಅಕ್ರಮ ಕಸಾಯಿಖಾನೆಗಳು ನಡೆಯುತ್ತಿರುವ ವಿಚಾರ ಪೊಲೀಸರ ಗಮನಕ್ಕೆ ಬಂದಿದ್ದರೂ ಕೂಡಾ ಮೂಡುಬಿದಿರೆ ಪೊಲೀಸರು ಕ್ರಮಕೈಗೊಂಡಿರುವುದಿಲ್ಲ.ಇಂತಹ ಹಲವು ಪ್ರಕರಣಗಳು ಮೂಡುಬಿದಿರೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು ಇದರಿಂದಾಗಿ ಶಾಂತಿ ಸೌಹಾರ್ದಕ್ಕೆ ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಈ ಬಗ್ಗೆ ಪೊಲೀಸರು ಕಾನೂನು ಕ್ರಮಕೈಗೊಳ್ಳದೆ ಇದ್ದಲ್ಲಿ ಸಂಘಟನೆಯ ಮೂಲಕ ಉಗ್ರ ಹೋರಾಟವನ್ನು ಮಾಡಲು ಸಿದ್ಧವಾಗಿದ್ದೇವೆ ಎಂದು ಹೇಳಿದರು.
