ಮೂಡುಬಿದರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪ : ಶಾಸಕ ಉಮಾನಾಥ ಎ ಕೋಟ್ಯಾನ್ ಅವರಿಂದ ಲೋಕಾರ್ಪಣೆ

ಮೂಡುಬಿದಿರೆ: ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಮಂಜೂರಾದ ರೂ.33.50 ಲಕ್ಷ ಅನುದಾನದಲ್ಲಿ ಮೂಡುಬಿದಿರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪಗಳನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಲೋಕಾರ್ಪಣೆಗೊಳಿಸಿದರು.

ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ,ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ದಿವ್ಯಾ ಜಗದೀಶ್, ಸ್ವಾತಿ ಪ್ರಭು, ಸೌಮ್ಯ ಶೆಟ್ಟಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಪುರಸಭಾ ನಾಮ ನಿರ್ದೇಶಿತ ಸದಸ್ಯರಾದ ದಿನೇಶ್ ಪೂಜಾರಿ, ರಾಘವ ಹೆಗ್ಡೆ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ನ ಹರೀಶ್ ಎಂ.ಕೆ., ಬೋಳ ವಿಶ್ವನಾಥ ಕಾಮತ್, ದಿವ್ಯವರ್ಮ ಬಲ್ಲಾಳ್ ಈ ಸಂದರ್ಭದಲ್ಲಿದ್ದರು.
