ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು ಲಾರಿಯಿಂದ ರಸ್ತೆಗೆ ಚೆಲ್ಲಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಯದಿಂದ ಪಾರಾಗಿದ್ದಾರೆ.
