ಮೂಡುಬಿದಿರೆ : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು

ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು

ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ನೋ-ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವ ವಾಹನಗಳಿಗೆ ಮೂಡುಬಿದಿರೆ ಪೊಲೀಸರು ಗುರುವಾರ ಸಂಜೆ ಲಾಕ್ ಮಾಡಿ ಎಚ್ಚರಿಕೆ ನೀಡಿದ ಘಟನೆ ನಡೆಯಿತು.
ಮೂಡುಬಿದಿರೆಯ ಬಸ್ ನಿಲ್ದಾಣದ ಆವರಣದಲ್ಲಿ ಖಾಸಗಿ ವ್ಯಕ್ತಿಗಳು ಕಾರು, ಆಟೋ, ಓಮ್ನಿ ಹಾಗೂ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಎಲ್ಲೆಲ್ಲಿಗೋ ಹೋಗಿ ಎಷ್ಟೋ ಹೊತ್ತಿನ ನಂತರ ತೆಗೆದುಕೊಂಡು ಹೋಗುವ ಪರಿಪಾಟವಿತ್ತು. ಇದರಿಂದಾಗಿ ಬಸ್ ಗಳನ್ನು ನಿಲ್ಲಿಸಲು ತೊಂದರೆಯಾಗುತ್ತಿತ್ತು. ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದರಿಂದ ಇತರ ವಾಹನ ಮತ್ತು ಪಾದಾಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ಪಾರ್ಕಿಂಗ್ ಸಮಸ್ಯೆಯ ಕುರಿತಾದ ಸಭೆಯಲ್ಲಿ ಸಾರ್ವಜನಿಕರು ಮತ್ತು ಬಸ್ ಏಜೆಂಟರ್ ಗಳು ಪೊಲೀಸರ ಗಮನಕ್ಕೆ ತಂದಿದ್ದರು.


ಈ ಬಗ್ಗೆ ಗಮನ ಹರಿಸಿರುವ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ಅವರ ನಿರ್ದೇಶನದಂತೆ ಪೊಲೀಸ್ ಉಪ ನಿರೀಕ್ಷಕ ಕೃಷ್ಣಪ್ಪ ಅವರ ನೇತೃತ್ವದಲ್ಲಿ ಸಿಬಂದಿಗಳು ನೋ-ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿರುವ ಕೆಲವು ವಾಹನಗಳಿಗೆ ಲಾಕ್ ಹಾಕಿದರು.
ಪೊಲೀಸರ ಈ ಕಾರ್ಯದ ಬಗ್ಗೆ ಮೂಡುಬಿದಿರೆಯ ಬಸ್ ಏಜೆಂಟರುಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published.