ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು.

ಅವರು ಮೂಡುಬಿದಿರೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ . ಶ್ರೀಪತಿ ಭಟ್ ವೇದಿಕೆಯಲ್ಲಿ ಪ್ರತಿದಿನ ಸಂಜೆ 6 ಗಂಟೆಗೆ ಆರಂಭಗೊಳ್ಳುವ ಈ ಉತ್ಸವವು ರಾತ್ರಿ 9.30ಕ್ಕೆ ಮುಕ್ತಾಯಗೊಳ್ಳಲಿದೆ. ಬೃಹತ್ ವೇದಿಕೆಯೆದುರು 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಕಣ್ತುಂಬಿಕೊಳ್ಳಲು ಅನುವಾಗುವಂತೆ ಆಸನದ ವ್ಯವಸ್ಥೆಯನ್ನು ಮಾಡಲಾಗುವುದು. ಸಂಸ್ಕೃತಿ ಪ್ರಿಯರೂ ಕಲಾ ಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದ ಯಶಸ್ಸಿಗೆ ಸಹಕರಿಸಬೇಕೆಂದು ಡಾ.ಎಂ.ಮೋಹನ ಆಳ್ವ ಅವರು ತಿಳಿಸಿದರು.

Related Posts

Leave a Reply

Your email address will not be published.