ಮೂಡುಬಿದರೆ : ಪ್ಲಾಸ್ಟಿಕ್ ಮುಕ್ತ ಪರಿಸರ ರಕ್ಷಣಾ ಅಭಿಯಾನ
ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ಘಟಕ, ಇಂಟರಾಕ್ಟ್ ಕ್ಲಬ್, ಶಾಲಾ ಸಂಸತ್ತು ಹಾಗೂ ಮೂಡುಬಿದಿರೆ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣಾ ಅಭಿಯಾನ ಮೂಡುಬಿದಿರೆ ಮಾರುಕಟ್ಟೆ ಸಮೀಪ ನಡೆಯಿತು.
ಪುರಸಭಾ ಮುಖ್ಯಾಧಿಕಾರಿ ಶಿವ ನಾಯಕ್ ಅಭಿಯಾನಕ್ಕೆ ಚಾಲನೆ ನೀಡಿ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು. ಈ ಜನ ಜಾಗೃತಿ ಕಾರ್ಯಕ್ರಮದಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ನಾರಾಯಣ ಪಿ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅನಂತ ಕೃಷ್ಣರಾವ್ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ. , ಶಾಲಾಆಡಳಿತ ಮಂಡಳಿಯ ಸದಸ್ಯರು , ಶಾಲಾ ಸ್ಕೌಟ್ ಸ್ಕೈಟ್ಸ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸ್ಪೂರ್ತಿ ವಿಶೇಷ ಶಾಲೆಯ ಮಕ್ಕಳು ತಯಾರಿಸಿದ ಬಟ್ಟೆಯ ಕೈ ಚೀಲಗಳನ್ನು ಖರೀದಿಸಿ ಶಾಲಾ ಮಕ್ಕಳು ಜನರಿಗೆ ವಿತರಿಸಿ ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಕಡಿಮೆ ಮಾಡುವಂತೆ ವಿನಂತಿಸಿದರು. ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ ಜೈನ್ ಸ್ವಾಗತಿಸಿದರು. ಶಾಲೆಯ ಪ್ಲಾಸ್ಟಿಕ್ ಮುಕ್ತ ಅಭಿಯಾನದ ರಾಯಭಾರಿ ಮೋಹನ್ ಹೊಸ್ಮಾರ್, ಆಡಳಿತಾಧಿಕಾರಿ ನಿತೇಶ್ ಕುಮಾರ್ ಮ್ಯಾನೇಜರ್ ಸತೀಶ್ ಉಪಸ್ಥಿತರಿದ್ದರು. ಹಿರಿಯ ಸಂಯೋಜಕ ಗಜಾನನ ಮರಾಠೆ ಕಾರ್ಯಕ್ರಮ ನಿರ್ವಹಿಸಿದರು.