ಮೂಳೂರು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ: ಅಪಘಾತದಲ್ಲಿ ಇಬ್ಬರು ಮೃತ್ಯು
ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಸಂಜೆಯ ವೇಳೆ ನಡೆದಿದೆ.
ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿತ್ತು. ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದಿದೆ.ಬೈಕ್ ನಲ್ಲಿದ್ದವರು ಯಾರೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಪಲಿಮಾರು ಗ್ರಾಮದ ಅವರಾಲ್ ನಿವಾಸಿಗಳು ಎಂದು ಹೇಳಲಾಗುತ್ತಿದೆ.ಘಟನಾ ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.