Homeಕ್ರೈಮ್ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿ ಈ ಘಟನೆ ಸಂಭವಿಸಿದೆ. ನಗರದ ಗುಂಡೇಟು ಬಿದ್ದ ವ್ಯಕ್ತಿ ಮುಸ್ತಾಕ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ.ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪ ಈತನ ಮೇಲಿತ್ತು. ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ ಮಜಹರು ಮಾಡಲು ಕರೆದೊಯ್ದಾಹ ಆರೋಪಿಯು ಪೊಲೀಸರ ಮೇಲೆರೆಗಿ ತಪ್ಪಿಸಲು ಮುಂದಾದ ಎನ್ನಲಾಗಿದೆ. ಈ ಸಂದರ್ಭ ಪೊಲೀಸರು ಆರೋಪಿಗೆ ಗುಂಡೇಟು ಹಾಕಿ ಬಂಧಿಸಿದರು ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments