ಐರ್ಲೆಂಡ್ ನಲ್ಲಿ ಕಡಬ ಯುವಕನ ನಿಗೂಢ ಸಾವು

ಕಡಬ: ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಅವರ ಪುತ್ರ ಸಾಂಜೋ ಸುನಿಲ್ (31) ಎಂದು ಗುರುತಿಸಲಾಗಿದೆ. ಇವರು ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್ಟೌನ್ ಪ್ರದೇಶದಲ್ಲಿ ವಾಸವಾಗಿದ್ದರು.

ಗುರುವಾರ ಸಾಂಜೋ ಸುನಿಲ್ ಅವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಐರಿಶ್ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿದ್ದರೂ, ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಪೊಲೀಸರು ಇದನ್ನು ಸಂಶಯಾಸ್ಪದ ಸಾವು ಎಂದು ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪತಿಯ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಸಾಂಜೋ ಅವರ ಪತ್ನಿ ತೀವ್ರ ಆಘಾತಕ್ಕೊಳಗಾಗಿ ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ

Related Posts

Leave a Reply

Your email address will not be published.