ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು
