ಮಂಗಳೂರು – ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿ, ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಣೆ
ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಮಗಾರಿಗಳಿಗೆ ಪರಿಶೀಲನೆ ನಡೆಸಿದರು.
ಮಂಗಳೂರಿನ ನಗರದ ಪಂಪ್‍ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಸ್ಮಾರ್ಟ್ ಸಿಟಿಯಡಿಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್ ವೀಕ್ಷಣೆಯನ್ನು ಮಾಡಿದರು.
ಬೋಳಾರದಲ್ಲಿ ನಿರ್ಮಾಣವಾದ ಈಜುಕೊಳ ಕಾಮಗಾರಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸಂಸದರು, ಮಂಗಳೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ರೈಲ್ವೇ ಬ್ರಿಡ್ಜ್‍ಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
…
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣಪ್ರಭ ಕೆ ಎಸ್ ಮುಂತಾದವರು ಉಪಸ್ಥಿತರಿದ್ದರು.